ಕರ್ನಾಟಕ

karnataka

ETV Bharat / entertainment

S/O ಮುತ್ತಣ್ಣ; ಪ್ರಣಂ ದೇವರಾಜ್ ಹೊಸ ಸಿನಿಮಾಗೆ ಸಾಥ್ ಕೊಟ್ಟ ಡೈನಾಮಿಕ್ ಫ್ಯಾಮಿಲಿ - Pranam Devaraj

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ನೂತನ ಚಿತ್ರ ಸೆಟ್ಟೇರಿದೆ. ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ.

ಪ್ರಣಂ ದೇವರಾಜ್
ಪ್ರಣಂ ದೇವರಾಜ್

By ETV Bharat Karnataka Team

Published : Jan 8, 2024, 7:10 PM IST

ಕುಮಾರಿ 21ಎಫ್‌ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿರುವ ಪ್ರಣಂ ದೇವರಾಜ್ ಈಗ ವಿಭಿನ್ನ ಶೀರ್ಷಿಕೆಯ S/O ಮುತ್ತಣ್ಣ ನಾಗಲು ಸಜ್ಜಾಗಿದ್ದಾರೆ.

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್. ಚಂದ್ರು ಹಾಗೂ ಪ್ರೇಮ್​ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ನೂತನ ಚಿತ್ರ ಸೆಟ್ಟೇರಿದೆ

S/O ಮುತ್ತಣ್ಣ ಸಿನಿಮಾದಲ್ಲಿರುವ ತಾರಾ ಬಳಗ:ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾ ಬಳಗದಲ್ಲಿದ್ದಾರೆ.

S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿತು

ಟೈಟಲ್ ಹೇಳುವಂತೆ ಇದೊಂದು ಅಪ್ಪ- ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್​ನಲ್ಲಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರ ತಂಡ ಶೂಟಿಂಗ್​ನಲ್ಲಿ ಬ್ಯುಸಿಯಾಗಿದೆ.

ಪ್ರಣಂ ದೇವರಾಜ್ ಹೊಸ ಸಿನಿಮಾಗೆ ಸಾಥ್ ಕೊಟ್ಟ ಡೈನಾಮಿಕ್ ಫ್ಯಾಮಿಲಿ

ಇದನ್ನೂ ಓದಿ:ಓಂ 2 ಬರುತ್ತೆ ಅಂದ್ರೆ ನಾನು ಎಷ್ಟು ವರ್ಷ ಬೇಕಾದರೂ ಕಾಯುತ್ತಿನಿ: ಶಿವರಾಜ್ ಕುಮಾರ್

ABOUT THE AUTHOR

...view details