ರಾಜಕಾರಣಿ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸುಪುತ್ರ ಝೈದ್ ಖಾನ್ ಅವರು ಬನಾರಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಸದ್ಯದಲ್ಲೇ ಎಂಟ್ರಿ ಕೊಡಲಿದ್ದಾರೆ. ಸದ್ಯ ಪೋಸ್ಟರ್, ಹಾಡುಗಳಿಂದ ಗಮನ ಸೆಳೆಯುತ್ತಿರೋ ಬನಾರಸ್ ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್ ಆಗಿದೆ.
ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಮಾಯಗಂಗೆ ಎಂಬ ಹಾಡಿನ ಮೋಡಿಗೆ ಸಿಲುಕಿದವರೇ ಇಲ್ಲ. ಸಾಹಿತ್ಯ, ಸಂಗೀತ, ದೃಷ್ಯೀಕರಣ ಸೇರಿದಂತೆ ಎಲ್ಲದರಲ್ಲಿಯೂ ಸೈ ಎನ್ನಿಸಿಕೊಂಡಿದ ಮಾಯಗಂಗೆ ಇಂದಿಗೂ ಟ್ರೆಂಡಿಂಗ್‌ನಲ್ಲಿದೆ. ಇದೀಗ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಗೊಂಡಿದೆ. ‘ಎಲ್ಲ ಟ್ರೋಲು, ಎಲ್ಲಾ ಟ್ರೋಲು, ಸಿಕ್ಕಾಪಟ್ಟೆ ಕೊಲೆಸ್ಟ್ರಾಲು’ ಅಂತ ಶುರುವಾಗೋ ಈ ಹಾಡಿಗೆ ಡಾ.ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.
ವಿಶೇಷವೆಂದರೆ ಸಂಗೀತ ಸಂಯೋಜನೆ ಮಾಡಿರುವ ಅಜನೀಶ್ ಲೋಕನಾಥ್ ಅವರೇ ಈ ಹಾಡನ್ನು ಹಾಡಿದ್ದಾರೆ. ಸಾಮಾನ್ಯವಾಗಿ ಮೆಲೋಡಿ ಹಾಡುಗಳ ಮೂಲಕ ಗಮನ ಸೆಳೆಯುವ, ಅದಕ್ಕೆ ಪ್ರಸಿದ್ಧಿ ಪಡೆದುಕೊಂಡಿರುವವರು ನಾಗೇಂದ್ರ ಪ್ರಸಾದ್ ಅವರು ಆಗಾಗ ಟಪ್ಪಾಂಗುಚ್ಚಿ ಸಾಂಗಿಗೂ ಸೈ ಎಂಬುದನ್ನು ಸಾಬೀತು ಪಡಿಸುತ್ತಿರುತ್ತಾರೆ. ಈ ಟ್ರೋಲ್ ಹಾಡಿನ ಮೂಲಕ ಅದು ಮತ್ತೊಮ್ಮೆ ಸಾಬೀತಾಗಿದೆ.