ಕನ್ನಡ ಬಿಗ್ ಬಾಸ್ ಸೀಸನ್ 10ರ ನಾಲ್ಕನೇ ವಾರ ಮನೆಯಲ್ಲಿ ಕಿಚ್ಚು ಹೊತ್ತಿಕೊಂಡಿದೆ. ಈ ವಾರದ ಟಾಸ್ಕ್‌ನಲ್ಲಿ ಸೋತು ಒಳಗೊಳಗೆ ಕುದಿಯುತ್ತಿರುವ ಸಂಗೀತಾ ತಂಡ, ಶುಕ್ರವಾರ ಜಿಯೋ ಸಿನಿಮಾ ವತಿಯಿಂದ ನೀಡಲಾದ ಫನ್ ಫ್ರೈಡೇ (Fun Friday) ಟಾಸ್ಕ್‌ನಲ್ಲಿ ಗೆದ್ದು ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಈ ವಾರದ ಕ್ಯಾಪ್ಟನ್ ಆಗಿ ವಿನಯ್ ಆಯ್ಕೆಯಾಗಿದ್ದಾರೆ. ಅದು ಸಂಗೀತಾ ಗ್ಯಾಂಗ್‌ನ ತಳಮಳಕ್ಕೂ ಕಾರಣವಾಗಿದೆ.
ಟಾಸ್ಕ್‌ನ ನಂತರ ಮನೆಯವರೆಲ್ಲರ ಬಹುಮತದ ಅಭಿಪ್ರಾಯದ ಮೇರೆಗೆ ವಿನಯ್ ‘ಅತ್ಯುತ್ತಮ ಪ್ರದರ್ಶನ’ದ ಪದಕ ಕೊರಳಿಗೇರಿಸಿಕೊಂಡರೆ, ಸಂಗೀತ ಜೈಲಿನುಡುಗೆ ತೊಟ್ಟು ಬಂಧಿಯಾಗಿದ್ದಾರೆ. ಈ ನಡುವೆ ಜಿಯೋ ಸಿನಿಮಾ ಮನೆಯ ಸ್ಪರ್ಧಿಗಳಿಗೆ ‘ಏಳೋಂದ್ಲ ಏಳು’ ಎಂಬ ಟಾಸ್ಕ್ ನೀಡಿತ್ತು. ಅದರ ನಿರ್ವಹಣೆಯ ಜವಾಬ್ದಾರಿಯನ್ನು ಭಾಗ್ಯಶ್ರೀ ಅವರಿಗೆ ನೀಡಿತ್ತು. ತುಕಾಲಿ ಸಂತೋಷ್ ಅವರು ಸಂಗೀತಾ ಅವರ ತಂಡದಿಂದ ಆಡಿದರು.
ಆಟದ ನಿಯಮಗಳು: ‘ಏಳೊಂದ್ಲ ಏಳು’ ಇದು ಸಂಖ್ಯೆಗಳ ಆಟ. ಸಂಗೀತಾ ತಂಡದವರು ನೀಲಿ ಬಣ್ಣದ ಟೀ ಶರ್ಟ್ ಮತ್ತು ವಿನಯ್ ತಂಡದವರು ಕೆಂಪು ಬಣ್ಣದ ಟೀ ಶರ್ಟ್ ಧರಿಸಿದ್ದರು. ಅವರ ಟೀ ಶರ್ಟ್ ಮೇಲೆ ಒಂದೊಂದು ಅಂಕಿ ಬರೆಯಲಾಗಿತ್ತು. ಭಾಗ್ಯಶ್ರೀ ಒಮ್ಮೆ ಒಂದಿಷ್ಟು ಸಂಖ್ಯೆಗಳನ್ನು ಹೇಳುತ್ತಾರೆ. ತಂಡದ ಸದಸ್ಯರೆಲ್ಲ ತಮ್ಮ ಟೀ ಶರ್ಟ್ ಮೇಲಿನ ಅಂಕಿಗಳಿಗೆ ಅನುಗುಣವಾಗಿ ಭಾಗ್ಯಶ್ರೀ ಹೇಳಿದ ಸಂಖ್ಯೆಯಂತೆ ತಮ್ಮನ್ನು ತಾವು ಜೋಡಿಸಿಕೊಳ್ಳಬೇಕು.