ಕರ್ನಾಟಕ

karnataka

ETV Bharat / entertainment

'ಬೈರಾಗಿ' ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಿದ ದುನಿಯಾ ವಿಜಯ್‌ - Shivarajkumar starring Bairagi movie

ಬೈರಾಗಿ ಚಿತ್ರದ ಮೊದಲ ಲಿರಿಕಲ್‌ ಹಾಡು ಬಿಡುಗಡೆಯಾಗಿದೆ. ಅಕ್ಷಯ ತೃತೀಯ ದಿನದಂದು ನಟ ದುನಿಯಾ ವಿಜಯ್​​ ಹಾಡು ರಿಲೀಸ್​​ ಮಾಡಿ ಶುಭಕೋರಿದ್ದಾರೆ.

Byragi Movie First Lyrical Song  Released
ಬೈರಾಗಿ ಚಿತ್ರ ಪೋಸ್ಟರ್​​

By

Published : May 4, 2022, 10:05 AM IST

ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಅಭಿನಯದ 123ನೇ ಸಿನಿಮಾ 'ಬೈರಾಗಿ' ಟೈಟಲ್‌ನಿಂದಲೇ ಸದ್ದು ಮಾಡಿತ್ತು. ಸದ್ಯ ಚಿತ್ರತಂಡ ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿದೆ. ಇದರ ಬೆನ್ನಲ್ಲೇ ಈ ಚಿತ್ರದ ಮೊದಲ ಲಿರಿಕಲ್‌ ಹಾಡನ್ನು ಅಕ್ಷಯ ತೃತೀಯ ವಿಶೇಷ ದಿನದಂದು ದುನಿಯಾ ವಿಜಯ್ ಅನಾವರಣ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ... ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ' ಹಾಡು ಅದ್ಭುತವಾಗಿದೆ. ಮಾಸ್ ಬೀಟ್ ಕೇಳಿದಾಕ್ಷಣ ಕುಣಿಸುವ ಸಂಗೀತವಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿ ಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು ಎಂದರು.

​​

ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ. ನೂರಾರು ನೃತ್ಯಗಾರರು, ಬೃಹತ್ ಸೆಟ್, ಕಲರ್​​ಫುಲ್ ಕಾಸ್ಟ್ಯೂಮ್​​ನಲ್ಲಿ ಶಿವಣ್ಣ ಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನ್ನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಹಾಡು ಮೂಡಿ ಬಂದಿದೆ ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್.

ಬೈರಾಗಿ ಚಿತ್ರ ಪೋಸ್ಟರ್​​

ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಗುರು ಕಶ್ಯಪ್ ಸಂಭಾಷಣೆಯಿದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ನಿರ್ಮಿಸಿದ್ದು, ಜಗದೀಶ್ ಗೌಡ ವಿತರಣೆ ಮಾಡಲಿದ್ದಾರೆ.

ಇದನ್ನೂ ಓದಿ:ಹುಲಿ ಮುಖದ ಅವತಾರದಲ್ಲಿ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ದರ್ಶನ

ABOUT THE AUTHOR

...view details