ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್ ಹಾಟ್ ಬೆಡಗಿ ದಿಶಾ ಪಟಾನಿ ಆಗಾಗ ಹಾಟ್ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುತ್ತಾರೆ. ಇದೀಗ ಮತ್ತೆರಡು ಹಾಟ್ ಫೋಟೋಗಳನ್ನು ಶೇರ್ ಮಾಡಿದ್ದು, ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ದಿಶಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಎರಡು ಫೋಟೋ ಶೇರ್ ಮಾಡಿದ್ದಾರೆ. ಬಿಳಿ ಬಣ್ಣದ ಬಾಡಿ ಕಾನ್ ಡ್ರೆಸ್‌ನಲ್ಲಿ ಮಾದಕ ಪೋಸ್ ನೀಡಿದ್ದಾರೆ. ಇದರಲ್ಲಿ ಒಂದು ಫೋಟೋ ಬ್ಲರ್ ಆಗಿದೆ. ಅಭಿಮಾನಿಗಳು ದಿಶಾ ಮಾದಕ ಲುಕ್ಗೆ ಹಾರ್ಟ್ ಸಿಂಬಲ್ ಹಾಕಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ದಿಶಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ್ದು, ಸಕತ್ ವೈರಲ್ ಆಗುತ್ತಿವೆ.