ಕರ್ನಾಟಕ

karnataka

ETV Bharat / entertainment

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಟೈಟಲ್ ಲಾಂಚ್​​ಗೆ ಮುಹೂರ್ತ ಫಿಕ್ಸ್

ಮಾಜಿ ಸಚಿವ ಜನಾರ್ದನ ​ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ವರ್ಷ ಮಾರ್ಚ್​ 4ರಂದು ಅದ್ದೂರಿ ಕಾರ್ಯಕ್ರಮದ ಮೂಲಕ ಸಿನಿಮಾದ ಮುಹೂರ್ತ ನೆರವೇರಿಸಲಾಗಿತ್ತು. ಆದರೆ, ಸಿನಿಮಾಗೆ ಟೈಟಲ್ ಅನಾವರಣ ಆಗಿರಲಿಲ್ಲ. ಈಗ ಚಿತ್ರದ ಟೈಟಲ್ ಅನಾವರಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 29ರಂದು ಚಿತ್ರದ ಶೀರ್ಷಿಕೆ ರಿವೀಲ್ ಆಗಲಿದೆ.

Janardhan Reddy Son Kireeti Reddy first Movie Tittle will be launch on sep 29
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಟೈಟಲ್ ಲಾಂಚ್​​ಗೆ ಮುಹೂರ್ತ ಫಿಕ್ಸ್

By

Published : Sep 28, 2022, 9:47 AM IST

ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಎಸ್.ಎಸ್ ರಾಜಮೌಳಿ ಕಿರೀಟಿಗೆ ಸಾಥ್ ನೀಡಿ ಪ್ರೋತ್ಸಾಹಿಸಿದ್ದರು. ಇಂಟ್ರುಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರುವ ಕಿರೀಟಿ ಒಂದೇ ನೋಟಕ್ಕೆ ಎಲ್ಲರನ್ನೂ ಸೆಳೆದಿದ್ದಾರೆ. ಸ್ಯಾಂಡಲ್​ವುಡ್ ಅಂಗಳಕ್ಕೆ ಭರವಸೆಯ ನಾಯಕ ನಟನಾಗುತ್ತಾನೆ ಎಂಬ ಭವಿಷ್ಯವಾಣಿಯೂ ಕೇಳಿಬಂದಿದೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಟೈಟಲ್ ಲಾಂಚ್​​ಗೆ ಮುಹೂರ್ತ ಫಿಕ್ಸ್

ಎಲ್ಲರ ಪ್ರೋತ್ಸಾಹದ ನುಡಿಗಳೊಂದಿಗೆ ಕಿರೀಟಿ ಮೊದಲ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ಕಿರೀಟಿ ಮೊದಲ ಚಿತ್ರದಿಂದ ಲೇಟೆಸ್ಟ್ ಅಪ್​ಡೇಟ್ ಹೊರಬಿದ್ದಿದೆ. ಚಿತ್ರದ ಟೈಟಲ್ ಅನಾವರಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 29ರಂದು(ನಾಳೆ) ಚಿತ್ರದ ಶೀರ್ಷಿಕೆ ರಿವೀಲ್ ಆಗಲಿದೆ. ಸಂಜೆ 6.39ಕ್ಕೆ 'ವಾರಾಹಿ' ಚಲನಚಿತ್ರ ಯೂಟ್ಯೂಬ್ ಚಾನಲ್​​ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವಿಡಿಯೋ ಬಿಡುಗಡೆಯಾಗಲಿದೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ

ಇದನ್ನೂ ಓದಿ:ಸ್ಯಾಂಡಲ್​​​​ವುಡ್​ ಮತ್ತು ಟಾಲಿವುಡ್​​ನಲ್ಲಿ ಒಟ್ಟಿಗೆ ಎಂಟ್ರಿ ನೀಡಲು ಜನಾರ್ದನ ರೆಡ್ಡಿ ಪುತ್ರ ರೆಡಿ..

ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ

ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀ ಲೀಲಾ ಸೇರಿದಂತೆ ದೊಡ್ಡ ತಾರಾಬಳಗ ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಶ್ರೀಮಂತವಾಗಿದ್ದು, ರಾಕ್​​ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ಡೈರೆಕ್ಟರ್ ಪೀಟರ್ ಹೆನ್ ಆ್ಯಕ್ಷನ್ ಚಿತ್ರಕ್ಕಿದೆ.

ಇದನ್ನೂ ಓದಿ:ಜನಾರ್ದನ್​ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಇಂಟ್ರೂಡಕ್ಷನ್ ಟೀಸರ್ ಹಿಂದಿನ ಪರಿಶ್ರಮ ಅನಾವರಣ

ABOUT THE AUTHOR

...view details