ಪ್ರಾಥಮಿಕ ಶಾಲೆಯಾಗಿರುವ 'ಬಿಗ್ ಬಾಸ್' ಮನೆಯಲ್ಲಿ ಪಾಠ ಪ್ರವಚನಗಳು ತರಗತಿಯಿಂದ ತರಗತಿಗೆ ಸೀರಿಯಸ್ ಆಗುತ್ತಾ ಹೋಗುತ್ತಿದೆ. ಮೊದಲ ದಿನಕ್ಕೆ ಹೋಲಿಸಿದರೆ ನಿನ್ನೆಯ ತರಗತಿಗಳು ಸಾಕಷ್ಟು ಸೀರಿಯಸ್ ಆಗಿದ್ದವು. ನಮ್ರತಾ ಕ್ಲಾಸಿನಲ್ಲಿ ಎಲ್ಲರೂ ಡಾನ್ಸ್ ಮಾಡಿ ಖುಷಿಪಟ್ಟರೆ, ಸಂಗೀತಾ ಬಹು ಗಂಭೀರವಾಗಿ ಅಧ್ಯಾತ್ಮದ ಪಾಠ ಹೇಳಿಕೊಟ್ಟಿದ್ದರು. ತುಂಬಾ ಗಹನವಾಗಿಯೂ ಇದ್ದ ಅವರ ತರಗತಿ ಪ್ರೀತಿಯನ್ನು ಹರಡುವ ಸಂದೇಶದೊಂದಿಗೆ ಕೊನೆಗೊಂಡಿತ್ತು.
ಸಿರಿ ಅವರ ತರಗತಿಯಲ್ಲಿ ಕಾರ್ತಿಕ್ ಮತ್ತು ವಿನಯ್ ಪರಸ್ಪರ ಹಾರ್ಟ್ ಕ್ರಾಫ್ಟ್ ಹಂಚಿಕೊಂಡು ಖುಷಿಯಾಗಿದ್ದರು. ಹಾಗಾದರೆ ಇಂದಿನ ತರಗತಿಗಳು ಹೇಗೆ ನಡೆಯುತ್ತಿವೆ? ಕಾರ್ತಿಕ್ ಪೊಲಿಟಿಕ್ಸ್ ತರಗತಿಯ ಝಲಕ್‌ನ ನಂತರ ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ವರ್ತೂರು ಸಂತೋಷ್ ಅವರ ಕ್ಲಾಸಿನ ಖದರ್ ಹೇಗಿದೆ? ಎನ್ನುವುದರ ಸುಳಿವು ನೀಡಿದೆ.
ಈ ವಾರದ ಬಿಗ್ ಬಾಸ್ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಈಗ ಹೈಯರ್ ಎಜುಕೇಷನ್‌ಗೆ ಕಾಲಿಟ್ಟಂತಿದೆ. ಚೇಷ್ಟೆಗಳು ಮುಗಿದು ಗಂಭೀರ ಚರ್ಚೆಗಳು ತರಗತಿಯಲ್ಲಿ ನಡೆಯುತ್ತಿದೆ. ಚರ್ಚೆಗೆ ಬುನಾದಿ ಹಾಕಿಕೊಟ್ಟವರು ಇಂದಿನ ಬಿಗ್ ಬಾಸ್ ವಿದ್ಯಾಲಯದಲ್ಲಿ ಪಾಠ ಮಾಡುತ್ತಿರುವ ಕಾರ್ತಿಕ್. ಕಾರ್ತಿಕ್ ಅವರು ರಾಜಕೀಯದ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠ ಮಾಡ್ತಿದ್ದಾರೆ. ಅದರಲ್ಲಿಯೂ ಉತ್ತಮ ನಾಯಕತ್ವ ಹೇಗಿರಬೇಕು? ಎಂಬುದರ ಕುರಿತು ಅವರು ಚರ್ಚೆ ಹುಟ್ಟುಹಾಕಿದ್ದಾರೆ. ಅದರಲ್ಲಿ ವಿದ್ಯಾರ್ಥಿಗಳೂ ಪಾಲ್ಗೊಳ್ಳುತ್ತಿದ್ದಾರೆ.