ಕೋಲ್ಕತ್ತಾ(ಪಶ್ಚಿಮ ಬಂಗಾಳ):ಕೇವಲ 21 ವರ್ಷದ ರೂಪದರ್ಶಿ, ನಟಿ ಬಿದಿಶಾ ಡಿ ಮಜುಂದಾರ್ ತಾವು ವಾಸವಾಗಿದ್ದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಟಿ ಆತ್ಮಹತ್ಯೆಗೆ ಶರಣಾಗಿರುವ ಸ್ಥಳದಲ್ಲಿ ಡೆತ್ನೋಟ್ ಲಭ್ಯವಾಗಿದ್ದು, ಪೊಲೀಸರು ಮೃತದೇಹವನ್ನ ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ನಟಿ ವಾಸವಾಗಿದ್ದು, ಮೇ. 25ರ ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಾಗಿಲು ಮುರಿದು ರೂಮ್ನೊಳಗೆ ಹೋಗಿ ನೋಡಿದಾಗ ನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಘಟನಾ ಸ್ಥಳಕ್ಕೆ ಈಗಾಗಲೇ ಬ್ಯಾರಕ್ಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.