'ಮುಗಿಲ್ ಪೇಟೆ', 'ಸಾಹೇಬ' ಸಿನಿಮಾ ನಂತರ ನಟ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ 'ಪ್ರಾರಂಭ' ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸದ್ಯಕ್ಕೆ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಚಿತ್ರ ಬಿಡುಗಡೆಗೂ ಡೇಟ್ ಫಿಕ್ಸ್ ಆಗಿದೆ.
ಈ ಕುರಿತು ಮಾತನಾಡಿದ ನಟ ಮನುರಂಜನ್ ರವಿಚಂದ್ರನ್, 'ಇದು ನನ್ನ ಅಭಿನಯದ 4ನೇ ಚಿತ್ರ. ಪ್ರೀತಿ ಕೈ ಕೊಟ್ಟರೆ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಅದು ತಪ್ಪು. ನಮಗೂ ಅಪ್ಪ, ಅಮ್ಮ, ಅಕ್ಕ, ತಂಗಿ, ಅಣ್ಣ, ತಮ್ಮ ಹೀಗೆ ಕುಟುಂಬ ಇರುತ್ತದೆ ಎಂಬುದನ್ನು ಯೋಚಿಸಿ ಮುನ್ನಡೆಯಬೇಕು. ಇಂತಹ ಕಥೆ ಪ್ರಾರಂಭದಲ್ಲಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ' ಎಂದರು.