ಕರ್ನಾಟಕ

karnataka

ETV Bharat / entertainment

ಜೀವನ ಸುತ್ತಾಟದ ಕಥಾಹಂದರ ಹೊಂದಿರುವ 'ರಂಗಿನ ರಾಟೆ'.. ಚಿತ್ರೀಕರಣ ಮುಕ್ತಾಯ - ರಂಗಿನ ರಾಟೆ ಚಿತ್ರ ಬಿಡುಗಡೆ

ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ ಎಂಬ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು "ರಂಗಿನ ರಾಟೆ" ಚಿತ್ರ ಸಿದ್ಧವಾಗುತ್ತಿದೆ. ಸದ್ಯಕ್ಕೆ ಚಿತ್ರೀಕರಣ ಮುಕ್ತಾಯವಾಗಿದ್ದು, ಸಿನಿಮಾ ಕುರಿತು ಚಿತ್ರತಂಡ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದೆ.

ರಂಗಿನ ರಾಟೆ
ರಂಗಿನ ರಾಟೆ

By

Published : Jun 22, 2022, 11:56 AM IST

'ದುನಿಯಾ' ಸಿನಿಮಾ ಮೂಲಕ ಸ್ಯಾಂಡಲ್​ವುಡ್​ನಲ್ಲಿ ತನ್ನದೇ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ದುನಿಯಾ ರಶ್ಮಿ. ಸದ್ಯಕ್ಕೆ 'ರಂಗಿನ ರಾಟೆ' ಎಂಬ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರ್ತಾ ಇದ್ದಾರೆ. ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ ಎಂಬ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರ ಸಿದ್ಧವಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಸಿನಿಮಾದ ವಿಶೇಷತೆ ಕುರಿತು ನಟ ರಾಜೀವ್ ರಾಥೋಡ್, ನಟಿ ಕಾವ್ಯ, ನಿರ್ದೇಶಕ ಆರ್ಮುಗಂ, ನಿರ್ಮಾಪಕಿ ಕವಿತಾ ಅರುಣ್ ಕುಮಾರ್ ಸೇರಿದಂತೆ ಚಿತ್ರತಂಡ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ಮೊದಲಿಗೆ ಮಾತನಾಡಿದ ನಟ ರಾಜೀವ್ ರಾಥೋಡ್, 'ಯುವರಾಜ' ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಗಿದೆ. ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ಇದು ಮೂರನೇ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದಗಳು. ನಿರ್ದೇಶಕರು ಕಥೆ ಹೇಳಿದ ಕೂಡಲೇ ಸಿನಿಮಾದಲ್ಲಿ ನಟಿಸಲು ನಿರ್ಧರಿಸಿದೆ. ಅನಿರೀಕ್ಷಿತ ಘಟನೆಯಲ್ಲಿ ನಾನು ಸಿಕ್ಕಿಹಾಕಿಕೊಳ್ಳುತ್ತೇನೆ. ಅದರಿಂದ ಹೇಗೆ ಪಾರಾಗುತ್ತೇನೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು ಎಂದರು.

ನಟ ರಾಜೀವ್ ರಾಥೋಡ್

ಇನ್ನು ಯುವ ನಟಿ ಭವ್ಯ, ಇದು ನನ್ನ ಮೊದಲ ಚಿತ್ರ. ಕಥೆಯೇ ಈ ಚಿತ್ರದ ನಾಯಕ, ನಾಯಕಿ. ರಾಜೀವ್ ರಾಥೋಡ್, ದುನಿಯಾ ರಶ್ಮಿ ಹಾಗೂ ನಾನು ಮುಖ್ಯಪಾತ್ರದಲ್ಲಿ ನಟಿಸಿದ್ದೇವೆ. ನಮ್ಮ ಚೊಚ್ಚಲ ಪ್ರಯತ್ನಕ್ಕೆ ನಿಮ್ಮ ಹಾರೈಕೆಯಿರಲಿ ಎಂದರು.

ನಟಿ ರಶ್ಮಿ

ನಿರ್ದೇಶಕ ಆರ್ಮುಗಂ ಮಾತನಾಡಿ, ನಾನು ಮುರಳಿ ಮೋಹನ್ ಅವರ ಬಳಿ ಕೆಲಸ ಮಾಡುತ್ತಿದ್ದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಎಲ್ಲರ ಜೀವನವೇ ಒಂದು ಸುತ್ತಾಟ. ರಾಟೆ ತಿರುಗಿದ ಹಾಗೆ. ಹಾಗಾಗಿ, ನಾನು ಚಿತ್ರಕ್ಕೆ ಈ ಶೀರ್ಷಿಕೆಯಿಟ್ಟಿದ್ದೀನಿ. ಚಿತ್ರೀಕರಣ ಮುಕ್ತಾಯವಾಗಿದೆ. ಆಗರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಹಾಗೂ ಸಂತೋಷ್ ನಾಲ್ಕು ಜನರ ಸುತ್ತ ಕಥೆ ಸಾಗುತ್ತದೆ. ಸಂತೋಷ್ ಮಳವಳ್ಳಿ ಅವರ ಮೂಲಕ ನಿರ್ಮಾಪಕಿ ಕವಿತಾ ಅರುಣ್ ಕುಮಾರ್ ಅವರ ಪರಿಚಯವಾಯಿತು. ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರೀಕರಣ ಮುಗಿದಿದೆ. ಸದ್ಯದಲ್ಲೇ ಮಾತಿನ ಜೋಡಣೆ ಆರಂಭವಾಗಲಿದೆ ಎಂದರು‌.

'ರಂಗಿನ ರಾಟೆ' ಚಿತ್ರೀಕರಣ

ನನಗೆ ಸಿನಿಮಾ ಮಾಡಲು ಇಷ್ಟವಿರಲಿಲ್ಲ. ಸಂತೋಷ್ ಅವರು ನಿರ್ದೇಶಕರ ಪರಿಚಯ‌ ಮಾಡಿಸಿದರು. ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದೆ. ಮೊದಲ ಪ್ರಯತ್ನ.‌ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕಿ ಕವಿತಾ ಅರುಣ್ ಕುಮಾರ್ ಹೇಳಿದರು.

ನಿರ್ದೇಶಕ ಚಂದ್ರು ಒಬ್ಬಯ್ಯ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿ ಸುವರ್ಣ ಛಾಯಾಗ್ರಹಣ, ದಾಮೋದರ ನಾಯ್ಡು ಅವರ ಸಂಕಲನವಿದೆ‌. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ನಲ್ಲಿರುವ 'ರಂಗಿನ ರಾಟೆ' ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ಇದನ್ನೂ ಓದಿ:ದೂದ್ ಪೇಡಾ ದಿಗಂತ್ ಕುತ್ತಿಗೆ ಭಾಗಕ್ಕೆ ಆಪರೇಷನ್, ಯಾವುದೇ ಅಪಾಯವಿಲ್ಲ ಎಂದ ವೈದ್ಯರು

ABOUT THE AUTHOR

...view details