ಕರ್ನಾಟಕ

karnataka

ETV Bharat / entertainment

'ತ್ರಿವಿಕ್ರಮ' ಚಿತ್ರದ ಮತ್ತೊದು ಹಾಡು ಬಿಡುಗಡೆ: ವಿಕ್ರಮ್, ಆಕಾಂಕ್ಷಾ ಶರ್ಮಾ ಸ್ಟೆಪ್ಸ್​​​ಗೆ ಅಭಿಮಾನಿಗಳು ಫಿದಾ - ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್

ತ್ರಿವಿಕ್ರಮ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ವಿಕ್ಕಿ ಹಾಗೂ ಆಕಾಂಕ್ಷಾ ಶರ್ಮಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

Trivikrama Movie another Song Released
ತ್ರಿವಿಕ್ರಮ ಚಿತ್ರದ ಮತ್ತೊಂದು ಹಾಡು ಬಿಡುಗಡೆ

By

Published : Jun 15, 2022, 10:51 AM IST

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್ ಅಭಿನಯದ ಚೊಚ್ಚಲ ಸಿನಿಮಾ ತ್ರಿವಿಕ್ರಮ. ಇದೇ ತಿಂಗಳ 24ರಂದು ತೆರೆಗೆ ಬರಲು ಸಜ್ಜಾಗಿದ್ದು, ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಸಿದೆ. ಈಗಾಗಲೇ ರಿಲೀಸ್ ಆಗಿರುವ, ಹಾಡು ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ತ್ರಿವಿಕ್ರಮ ಚಿತ್ರದ ಮತ್ತೊಂದು ಹಾಡು ಎ2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ.

ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್..'ಎಂಬ ಹಾಡನ್ನು ಮೋಹನ್ ಬಿ.ಕೆರೆ ಸ್ಟೂಡಿಯೋದಲ್ಲಿ ಹಾಕಲಾಗಿದ್ದ ಬೃಹತ್ ಸೆಟ್ ಹಾಗೂ ಕಲರ್ ಕಲರ್ ಕಾಸ್ಟ್ಯೂಮ್​​ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಅರ್ಜುನ್ ಜನ್ಯ ಸಂಗೀತವಿರುವ ಈ ಹಾಡಿಗೆ ಭೂಷಣ್ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಕ್ಕಿ ಹಾಗೂ ಆಕಾಂಕ್ಷಾ ಶರ್ಮಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ವಿಕ್ರಮ್, ಆಕಾಂಕ್ಷಾ ಶರ್ಮಾ

ನೂರಕ್ಕೂ ಅಧಿಕ ದಿನಗಳ ಕಾಲ ಶೂಟಿಂಗ್ ನಡೆಸಿರುವ ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ದೊಡ್ಡ ಮಟ್ಟದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಹಿರಿಯ ನಟಿ ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ.

ವಿಕ್ರಮ್, ಆಕಾಂಕ್ಷಾ ಶರ್ಮಾ

ರೋಜ್, ಮಾಸ್ ಲೀಡರ್ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಸಹನಾ ಮೂರ್ತಿ 'ತ್ರಿವಿಕ್ರಮ'ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ರೈ ಪತಾಜೆ ಛಾಯಾಗ್ರಹಣವಿದ್ದು, ಕೆ.ಎಂ.ಪ್ರಕಾಶ್ ಸಂಕಲನವಿದೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ.

ವಿಕ್ರಮ್, ಆಕಾಂಕ್ಷಾ ಶರ್ಮಾ

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ 'ಪ್ಲೀಸ್ ಮಮ್ಮಿ' ಹಾಗೂ 'ಹನಿ ಬನಿ ಫೀಲ್ ಮೈ ಲವ್' ಹಾಡು ಮಿಲಿಯನ್'ಗಟ್ಟಲೆ ಹಿಟ್ಸ್ ದಾಖಲಿಸಿ, ಟ್ರೆಂಡಿಂಗ್​​ನಲ್ಲಿದೆ.

ಇದನ್ನೂ ಓದಿ:ಕ್ರೇಜಿಸ್ಟಾರ್​ ಪುತ್ರನ ತ್ರಿವಿಕ್ರಮ ಹಾಡಿಗೆ ಸೆಲೆಬ್ರಿಟಿಗಳು ಫಿದಾ

For All Latest Updates

ABOUT THE AUTHOR

...view details