ಯಾದಗಿರಿ: ಹೆಮ್ಮಾರಿ ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆದರೆ, ಇಲ್ಲೊಂದು ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸರ್ಕಾರದ ನಿಯಮಗಳನ್ನೆಲ್ಲ ಗಾಳಿಗೆ ತೂರಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪಾಸಿಟಿವ್ ಪ್ರಕರಣಗಳಿಂದ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಯಾದಗಿರಿ ನೂತನ ಜಿಲ್ಲಾಸ್ಪತ್ರೆಯನ್ನು ಜಿಲ್ಲಾಡಳಿತ ಕೋವಿಡ್ ಕೇರ್ ಸೆಂಟರ್ ಆಗಿ ಮಾಡಿದೆ. ಈ ಆಸ್ಪತ್ರೆಯ ವೈದ್ಯ ಡಾ. ಭೀಮನಗೌಡ ಕೋವಿಡ್ ಕೇರ್ ಸೆಂಟರ್ನಲ್ಲಿ ಮಾಸ್ಕ್ ಹಾಗೂ ಪಿಪಿಕಿಟ್ ಇಲ್ಲದೆ ಶರ್ಟ್ ಕೂಡ ಹಾಕಿಕೊಳ್ಳದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ರಾತ್ರಿ ಕೋವಿಡ್ ಸೋಂಕಿತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ತೆರಳಿದ್ದ ವೇಳೆ ವೈದ್ಯ ಭೀಮನಗೌಡ ಶರ್ಟ್ ಕೂಡ ಹಾಕಿಕೊಂಡಿರಲಿಲ್ಲ ಎಂದು ಕೋವಿಡ್ ಸೋಂಕಿತನ ಜೊತೆಗಿದ್ದವರು ಆರೋಪ ಮಾಡಿದ್ದಾರೆ.