ಬೆಂಗಳೂರು : ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಸಭೆ ನಡೆಯಿತು. ಸಭೆಯಲ್ಲಿ ಆಕ್ಸಿಜನ್ ಪೂರೈಕೆಗೆ ಇರುವ ಸಮಸ್ಯೆಗಳ ಕುರಿತು ವಿಸ್ತೃತವಾದ ಚರ್ಚೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಿಎಂ, ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು, ಆಕ್ಸಿಜನ್ ಟ್ಯಾಂಕರ್ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.