ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ, ಔಷಧ ಹಾಗೂ ಲಸಿಕೆ ಕೊರತೆ ಬಗ್ಗೆ ಚರ್ಚೆ ಸಂಬಂಧ ಇಂದು ಕರೆದಿರುವ ತುರ್ತು ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟ ಘಟನೆ ಹಾಗೂ ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ಹಾಗೂ ಇಂತಹ ದುರಂತಗಳು ಮರುಕಳಿಸದಂತೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಗಂಭೀರ ಚರ್ಚೆ ನಡೆಯುತ್ತಿದೆ.