ನವದೆಹಲಿ: ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು ಹಿನ್ನೆಲೆ ಪಿಎಂ ಮೋದಿ ಮೇ 18 ಮತ್ತು 20 ರಂದು ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು: ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಲು ಮುಂದಾದ ಪಿಎಂ - ನವದೆಹಲಿ
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು ಪರಿಶೀಲಿಸಲು ಪ್ರಧಾನಿ ಮೋದಿ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ ಎಂದು ಭಾರತ ಸರ್ಕಾರದ ಮೂಲಗಳು ತಿಳಿಸಿವೆ.
meetings-of-pm-modi-over-covid-crisis-in-india
ಯಾವ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆಯೋ ಅಂತಹ ಜಿಲ್ಲಾಧಿಕಾರಿಗಳ ಜೊತೆ ಮೋದಿ ಅವರು ಸಂವಹನ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಸಮಯದಲ್ಲಿ ರಾಜ್ಯದ ಸಿಎಂಗಳೂ ಕೂಡ ಹಾಜರಾಗಲಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೇ 18 ರಂದು 9 ರಾಜ್ಯಗಳ 46 ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಇದರ ನಂತರ ಮೇ 20 ರಂದು ಪಿಎಂ ಮೋದಿ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.