ಮ್ಯಾಂಚೆಸ್ಟರ್:ಪಾಕಿಸ್ತಾನ ವಿರುದ್ಧ ಆಕರ್ಷಕ ಶತಕ ದಾಖಲಿಸಿದ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವೇಗವಾಗಿ 24 ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಪುಡಿಗಟ್ಟಿದ್ದಾರೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆದ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯದಲ್ಲಿ ರೋಹಿತ್ ಕೇವಲ 113 ಎಸೆತಗಳಲ್ಲಿ 140 ರನ್ಗಳಿಸಿದ್ದರು. ಈ ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ 24 ಶತಕಗಳನ್ನು ವೇಗವಾಗಿ ಪೂರೈಸಿದ ರೋಹಿತ್ ವೇಗವಾಗಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಹಾಗೂ ಭಾರತದ 2ನೇ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.