ಅಲಬಾಮಾ: 14 ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಐವರನ್ನು ಮನಬಂದಂತೆ ಪಿಸ್ತೂಲ್ನಿಂದ ಗುಂಡು ಹಾರಿಸಿರುವ ಘಟನೆ ಇಲ್ಲಿನ ಎಕ್ಮೌಂಟ್ನಲ್ಲಿ ನಡೆದಿದೆ.
14 ವರ್ಷದ ಪೋರ ತನ್ನ ತಂದೆ, ಮಲತಾಯಿ ಮತ್ತು ಮೂವರು ಒಡಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಮೊಳಗುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿ ಸುದ್ದಿ ರವಾನಿಸಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ರಕ್ಷಣಾ ಕಾರ್ಯಕೈಗೊಂಡಿದ್ದರು.
ಘಟನೆಯಲ್ಲಿ ಮಲತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಮತ್ತು ಮತ್ತೊಂದು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನು ಈ ಘಟನೆ ಬಗ್ಗೆ ನಿಖರ ಕಾರಣ ತಿಳಿದು ಬರಬೇಕೆಂದು ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇಂತಹ ಘಟನೆಗಳು ಇತ್ತೀಚೆಗೆ ಕಾಮನ್ ಎನ್ನುವಂತ ಭೀಕರ ವಾತಾವರಣ ಇದೆ. ಈ ಬಗ್ಗೆ ಈ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ತೀವ್ರ ಕಳವಳ ವ್ಯಕ್ತಪಡಿಸಿ ವಿಶೇಷ ಕಾನೂನಿಗೂ ಮುಂದಾಗಿದ್ದರು.