ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ 'ಒಮಿಕ್ರೋನ್' ಅಮೆರಿಕಾದಲ್ಲಿ ಹರಡುತ್ತಿದೆ. ದೇಶದಲ್ಲಿ ಈವರೆಗೆ 3 ಒಮಿಕ್ರೋನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಅಮೆರಿಕ ಆರೋಗ್ಯ ಇಲಾಖೆ ಖಚಿತ ಪಡಿಸಿದೆ.
ಬುಧವಾರವಷ್ಟೇ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆಯಾಗಿತ್ತು. ಬಳಿಕ ಮಿನ್ನೆಸೋಟಾದಲ್ಲಿ ಎರಡನೇ ಪ್ರಕರಣ ಹಾಗೂ ಸದ್ಯ ಕೊಲೊರಾಡೋದಲ್ಲಿ 3ನೇ ಪ್ರಕರಣ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಿನ್ನೆಸೋಟಾದಲ್ಲಿ ಪತ್ತೆಯಾದ ಸೋಂಕಿತ ಎರಡು ದಿನಗಳ ಹಿಂದೆಯಷ್ಟೇ ನ್ಯೂಯಾರ್ಕ್ ನಗರದಲ್ಲಿ ಆಯೋಜಿಸಿದ್ದ ಕಾನ್ಫರನ್ಸ್ವೊಂದರಲ್ಲಿ ಭಾಗಿಯಾಗಿದ್ದ. ಈ ಮೂಲಕ ಸಮುದಾಯಕ್ಕೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಾನ್ಪರನ್ಸ್ಗೆ ಆಗಮಿಸಿದ್ದವರನ್ನು ಟೆಸ್ಟ್ಗೆ ಒಳಪಡಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.