ಫಿಲಡೆಲ್ಫಿಯಾ (ಪೆನ್ಸಿಲ್ವೇನಿಯಾ): ಇಲ್ಲಿನ ಉತ್ತರ ಫಿಲಡೆಲ್ಫಿಯಾ ಭಾಗದ ಸಾರಿಗೆ ನಿಲ್ದಾಣ ಕೇಂದ್ರದಲ್ಲಿ ನಡೆದ ಬಂದೂಕುಧಾರಿಗಳ ಗುಂಡಿನ ದಾಳಿಗೆ ಸುಮಾರು 8 ಮಂದಿ ನಾಗರಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
71 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೊದಲಿಗೆ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದರೆ ಬಳಿಕ ಕಾಲಿಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಎಲ್ಲ ಗಾಯಾಳುಗಳಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.