ವಾಷಿಂಗ್ಟನ್(ಅಮೆರಿಕ): ಮ್ಯಾನ್ಮಾರ್‌ನ ಆಡಳಿತಾರೂಢ ಪಕ್ಷದ ಕೌನ್ಸಿಲರ್ ಆಂಗ್ ಸಾನ್ ಸೂಕಿ ಸೇರಿದಂತೆ ಹಲವು ನಾಯಕರನ್ನು ಅಲ್ಲಿನ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಗೃಹಬಂಧನದಲ್ಲಿರಿಸಿದೆ. ಸದ್ಯದ ಮ್ಯಾನ್ಮಾರ್ ವಿದ್ಯಮಾನಗಳನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರು ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ.
ಬರ್ಮಾದಲ್ಲಿ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಮತ್ತು ಇತರ ಅಧಿಕಾರಿಗಳ ಬಂಧನ ಸೇರಿದಂತೆ ದೇಶದ ಪ್ರಜಾಪ್ರಭುತ್ವವನ್ನು ಹಾಳು ಮಾಡಲು ಅಲ್ಲಿನ ಸೇನೆ ಕ್ರಮ ಕೈಗೊಂಡಿದೆ ಎಂಬ ವರದಿಗಳಿಂದ ಅಮೆರಿಕ ಗಾಬರಿಗೊಂಡಿದೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ ಹೇಳಿದ್ದಾರೆ.