ವಾಷಿಂಗ್ಟನ್:ಅಮೆರಿಕಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉನ್ನತ ಸಹಾಯಕರಾದ ಸ್ಟೀಫನ್ ಮಿಲ್ಲರ್ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಶ್ವೇತಭವನದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಕಳೆದ ಐದು ದಿನಗಳಿಂದ ನಾನು ಕ್ವಾರಂಟೈನ್ಗೆ ಒಳಗಾಗಿದ್ದು, ಎಲ್ಲರಿಂದ ಪ್ರತ್ಯೇಕವಾಗಿದ್ದೇನೆ. ಪ್ರತೀ ದಿನ ಕೋವಿಡ್ ಪರೀಕ್ಷೆಗೆ ಒಳಗಾಗುತ್ತಿದ್ದೇನೆ. ಇಲ್ಲಿಯವರೆಗೆ ನನ್ನ ವರದಿ ನೆಗೆಟಿವ್ ಬಂದಿತ್ತು. ಆದರೀಗ ಕೋವಿಡ್ ಸೋಂಕು ತಗುಲಿರುವುದು ಕಂಡು ಬಂದಿದ್ದು, ಕ್ವಾರಂಟೈನ್ನಲ್ಲಿ ಇದ್ದೇನೆ ಎಂದು ಮಿಲ್ಲರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.