ವಾಷಿಂಗ್ಟನ್:ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಸದ್ಯ ತಲ್ಲಣದ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟಾರೆಸ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ ಎಂದು ವಕ್ತಾರ ಸ್ಟೀಫನ್ ಡುಜರಿಕ್ ಹೇಳಿದ್ದಾರೆ.
ಉಭಯ ದೇಶಗಳ ಗಡಿ ಭಾಗದಲ್ಲಿ ತಲ್ಲಣದ ವಾತಾವರಣ ನಿರ್ಮಾಣವಾಗಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಎರಡೂ ದೇಶಗಳು ಸಂಯಮದಿಂದ ಮುಂದುವರೆಯಬೇಕು ಎಂದು ಡುಜರಿಕ್ ಮನವಿ ಮಾಡಿದ್ದಾರೆ.