ಕನೋಶ್ (ಅಮೆರಿಕ): ನಗರದ ಉತಾಹ್ ಹೆದ್ದಾರಿಯಲ್ಲಿ 22 ವಾಹನಗಳ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ವಾರಾಂತ್ಯವಾದ್ದರಿಂದ ಅಂತಾರಾಜ್ಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ 10 ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.