ನ್ಯೂಯಾರ್ಕ್ (ಯುಎಸ್):ಉಕ್ರೇನ್ -ರಷ್ಯಾ ಬಿಕ್ಕಟ್ಟಿನ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆ ನಡೆದಿದ್ದು, ಭಾರತ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.
'ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಿರ್ಮಾಣವಾಗಿರುವ ಉದ್ವಿಗ್ನ ವಾತಾವರಣ ಕುರಿತು ಕಳವಳ ವ್ಯಕ್ತಪಡಿಸಿರುವ ಭಾರತ, ಉಭಯ ದೇಶಗಳು ಗಡಿಯಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಬೇಕು'' ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಸಲಹೆ ನೀಡಿದೆ.
'ಸಂಯಮ ಕಾಪಾಡಿಕೊಳ್ಳುವುದರ ಜೊತೆಗೆ ರಾಜತಾಂತ್ರಿಕ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಪ್ರಯತ್ನಿಸಬೇಕು. ಶಾಂತಿ, ಭದ್ರತೆ ಕಾಪಾಡಿಕೊಳ್ಳುವುದು ಅತಿಮುಖ್ಯ' ಎಂದು ಅವರು ಪ್ರತಿಪಾದಿಸಿದರು.
'ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಗತ್ಯ. ಉಕ್ರೇನ್ನಲ್ಲಿ 20 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ವಾಸಿಸುತ್ತಿದ್ದಾರೆ. ಅವರ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ' ಎಂದು ಟಿ.ಎಸ್. ತಿರುಮೂರ್ತಿ ಭದ್ರತಾ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ:ಉಕ್ರೇನ್ ಬಿಕ್ಕಟ್ಟು: ಭದ್ರತಾ ಮಂಡಳಿಯ ತುರ್ತು ಸಭೆ ಕರೆದ ವಿಶ್ವಸಂಸ್ಥೆ