ವಾಷಿಂಗ್ಟನ್(ಅಮೆರಿಕ):ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಭದ್ರತಾ ಪಡೆಗಳನ್ನು ವಾಪಸ್ ಕರೆದುಕೊಂಡ ವಿಚಾರದ ಬಗ್ಗೆ ನಾನು ಕ್ಷಮೆ ಕೇಳುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಸ್ಪಷ್ಟನೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಡನ್ 20 ವರ್ಷಗಳ ನಂತರ ಅಫ್ಘಾನಿಸ್ತಾನದಿಂದ ಹೊರಬರಲು ಬೇರೆ ಯಾವುದೇ ಮಾರ್ಗ ಇರಲಿಲ್ಲ. ಯಾವಾಗ ಪ್ರಶ್ನೆ ಮಾಡಿದರೂ, ನಾನು ಆ ಕುರಿತು ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ.
ತೆಗೆದುಕೊಂಡ ನಿರ್ಧಾರ ಸರಿಯಾಗೇ ಇದೆ
ತಾಲಿಬಾನ್‌ನ ಅಸಮರ್ಥತೆಯ ಪರಿಣಾಮವಾಗಿ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ನನಗೆ ಬೇಸರವಾಗುತ್ತಿದೆ. ನಮ್ಮ ವಿರುದ್ಧ ವಿಮಾನ ನಿಲ್ದಾಣದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಅಫ್ಘಾನಿಸ್ತಾನ ನಾಗರಿಕರ ಬಗ್ಗೆ ಕಳಕಳಿಯಿದೆ ಎಂದು ಬೈಡನ್ ಹೇಳಿದ್ದಾರೆ.
ಒಂದು ವೇಳೆ ನಾವು ಅಫ್ಘಾನಿಸ್ತಾನದಲ್ಲಿಯೇ ಉಳಿದುಕೊಂಡಿದ್ದರೆ, ಮತ್ತೆ 25 ಸಾವಿರದಿಂದ 50 ಸಾವಿರ ಸೈನಿಕರನ್ನು ನಿಯೋಜನೆ ಮಾಡಲು ಕೇಳಿಕೊಳ್ಳಲಾಗುತ್ತಿತ್ತು ಎಂದು ಬೈಡನ್ ಹೇಳಿದ್ದಾರೆ.