ಕರ್ನಾಟಕ

karnataka

ETV Bharat / international

ಬೈಡನ್ - ಪುಟಿನ್ ದ್ವಿಪಕ್ಷೀಯ ಮಾತುಕತೆ: ಶಸ್ತ್ರಾಸ್ತ್ರ ಕಡಿತ ಒಪ್ಪಂದ ವಿಸ್ತರಣೆ - ಶ್ವೇತಭವನ

ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಲವಾರು ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Biden, Putin
ಬೈಡನ್-ಪುಟಿನ್

By

Published : Jan 27, 2021, 6:39 AM IST

ವಾಷಿಂಗ್ಟನ್:ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕಾರ್ಯತಂತ್ರದ ಶಸ್ತ್ರಾಸ್ತ್ರ ಕಡಿತ ಒಪ್ಪಂದ ವಿಸ್ತರಣೆ ಮತ್ತು ಹಲವಾರು ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಅಧ್ಯಕ್ಷ ಜೋ ಬೈಡನ್ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದರು. ಶಸ್ತ್ರಾಸ್ತ್ರ ಕಡಿತ ಒಪ್ಪಂದ ಐದು ವರ್ಷಗಳವರೆಗೆ ವಿಸ್ತರಿಸುವ ಕುರಿತಾದ ಎರಡೂ ದೇಶಗಳ ಇಚ್ಛೆಯ ಬಗ್ಗೆ ಅವರು ಚರ್ಚಿಸಿದರು. ಫೆಬ್ರವರಿ 5 ರೊಳಗೆ ವಿಸ್ತರಣೆಯನ್ನು ಪೂರ್ಣಗೊಳಿಸಲು ತಮ್ಮ ದೇಶಗಳು ತುರ್ತಾಗಿ ಕೆಲಸ ಮಾಡಲು ಒಪ್ಪಿಕೊಂಡರು" ಎಂದು ಶ್ವೇತಭವನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಶಸ್ತ್ರಾಸ್ತ್ರ ನಿಯಂತ್ರಣ ಮತ್ತು ಉದಯೋನ್ಮುಖ ಭದ್ರತಾ ವಿಷಯಗಳ ಕುರಿತು ಕಾರ್ಯತಂತ್ರದ ಸ್ಥಿರತೆ ಚರ್ಚೆಗಳನ್ನು ಅನ್ವೇಷಿಸಲು ಅವರು ಒಪ್ಪಿಕೊಂಡರು. ಅಧ್ಯಕ್ಷ ಬೈಡನ್ ಉಕ್ರೇನ್‌ನ ಸಾರ್ವಭೌಮತ್ವಕ್ಕೆ ಯುನೈಟೆಡ್ ಸ್ಟೇಟ್ಸ್​ನ ದೃಢವಾದ ಬೆಂಬಲವನ್ನು ಸೂಚಿಸಿದ್ದಾರೆ" ಎಂದು ಹೇಳಿಕೆ ತಿಳಿಸಿದೆ.

ABOUT THE AUTHOR

...view details