ವಾಷಿಂಗ್ಟನ್: ಪೂರ್ವ ಲಡಾಖ್‌ನಲ್ಲಿ ಚೀನಾದ ಸೈನಿರೊಂದಿಗೆ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಅಮೆರಿಕ ಸಂತಾಪ ಸೂಚಿಸಿದ್ದು, ಅವರ ಧೈರ್ಯವನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಸಂತಾಪ ಸೂಚಿಸುತ್ತೇವೆ. ಹುತಾತ್ಮ ಯೋಧರ ಕುಟುಂಬಗಳು ಹಾಗೂ ಅವರ ಪ್ರೀತಿ ಪಾತ್ರರನ್ನು ನೆನಪಿಸಿಕೊಳ್ಳುತ್ತೇವೆ ಎಂದಿದ್ದಾರೆ.