ರಿಯೋ ಡಿ ಜನೈರೊ:ಬ್ರೆಜಿಲ್ನಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲ್ಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 1,910 ಸಾವಿನ ಪ್ರಕರಣಗಳು ವರದಿಯಾಗಿವೆ.
ಆರೋಗ್ಯ ಸಚಿವಾಲಯದ ಪ್ರಕಾರ, ದೇಶದ ಒಟ್ಟಾರೆ ಸಾವಿನ ಸಂಖ್ಯೆ 2,59,271ಕ್ಕೆ ತಲುಪಿದೆ. ಸೋಂಕು ಹಬ್ಬಿದ ಬಳಿಕ ಎರಡನೇ ಅತ್ಯಧಿಕ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ದಾಖಲಿಗಿದೆ.
71,704 ಜನರಿಗೆ ಸೋಂಕು ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಟ್ಟು 10,718,630 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕ್ಸಿನ್ಹುವಾ ಸುದ್ದಿ ಏಜೆನ್ಸಿ ವರದಿ ಮಾಡಿದೆ.