ಟೊರೊಂಟೋ,ಕೆನಡಾ :ಕೊರೊನಾ ವೈರಸ್ ಎಲ್ಲಾ ದೇಶಗಳನ್ನು ಬಾಧಿಸುತ್ತಿದೆ. ಕೋವಿಡ್ ಲಸಿಕೆಯಿಂದ ಅಪಾಯದ ಮಟ್ಟವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆಯನ್ನು ಕಡ್ಡಾಯ ಮಾಡಿದ ಕೆನಡಾ ಸರ್ಕಾರದ ವಿರುದ್ಧ ಜನಾಕ್ರೋಶ ಮುಗಿಲುಮುಟ್ಟಿದೆ.
ಕೋವಿಡ್ ಲಸಿಕೆ ವಿರುದ್ಧ ಜನರ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ಕುಟುಂಬವು ದೇಶದ ರಾಜಧಾನಿಯಲ್ಲಿದ್ದ ತಮ್ಮ ನಿವಾಸವನ್ನು ಬಿಟ್ಟು ಬೇರೊಂದು ರಹಸ್ಯ ಸ್ಥಳಕ್ಕೆ ಸ್ಥಳಾಂತರಗೊಂಡಿದೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ಜಸ್ಟಿನ್ ಟ್ರುಡೊ ಸರ್ಕಾರದ ಕೊರೊನಾ ವೈರಸ್ ಮಾರ್ಗಸೂಚಿಗಳ ವಿರುದ್ಧ ಸಣ್ಣ ಪ್ರಮಾಣದ ಹೋರಾಟ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಕೊರೊನಾ ಲಸಿಕೆ ಕಡ್ಡಾಯ ಹಾಗೂ ಇತರ ನಿರ್ಬಂಧಗಳನ್ನು ತೆಗೆದು ಹಾಕುವಂತೆ ಸರ್ಕಾರವನ್ನು ಒತ್ತಾಯಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.