ಕೊರೊನಾ ಸಾಂಕ್ರಾಮಿಕ ರೋಗದಿಂದ ವಿಶ್ವದಾದ್ಯಂತ ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಸೋಂಕಿತರ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎಂದು ಕೆಲವು ವೈದ್ಯರು ನಂಬಿದ್ದಾರೆ. ಆದರೆ, ಹೈಡ್ರಾಕ್ಸಿಕ್ಲೋರೋಕ್ವಿನ್ ಜೊತೆಗೆ ಪ್ರತಿಜೀವಕ ಅಜಿಥ್ರೊಮೈಸಿನ್ ಸೇವಿಸುವುದರಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ ಎಂದು ವರದಿಯು ಎಚ್ಚರಿಸಿದೆ. ಈ ಔಷಧಿಗಳನ್ನು ಬಳಸುವಾಗ ಜಾಗರೂಕರಾಗಿರಿ, ಇಲ್ಲದಿದ್ದರೆ ಹೃದಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಎಚ್ಚರಿಸಲಾಗಿದೆ.
'ಕೋವಿಡ್ -19 ಚಿಕಿತ್ಸೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಪರಿಣಾಮದ ಬಗ್ಗೆ ಪ್ರಸ್ತುತ ಹೆಚ್ಚಿನ ಮಾಹಿತಿ ಇಲ್ಲ. ಆದಾಗ್ಯೂ, ಕೆಲವು ವೈದ್ಯರು ಕೊರೊನಾ ವೈರಸ್ ಚಿಕಿತ್ಸೆಗೆ ಇದನ್ನು ಬಳಸಲು ಯೋಚಿಸುತ್ತಿದ್ದಾರೆ. ಕೊರೊನಾ ರೋಗಿಗಳಿಗೆ ಈ ಔಷಧಗಳನ್ನು ಬಳಸಲು ಬಯಸುವ ವೈದ್ಯರು ಅಡ್ಡಪರಿಣಾಮಗಳನ್ನು ತಿಳಿದುಕೊಳ್ಳಿ ಎಂದು ಕೇಳಿಕೊಳ್ಳುತ್ತಿದ್ದೇನೆ' ಎಂದು ಒಎಚ್‌ಎಸ್‌ಯು ಸಹಾಯಕ ಪ್ರಾಧ್ಯಾಪಕ ಎರಿಕ್ ಸ್ಟೆಕರ್ ಹೇಳಿದ್ದಾರೆ