ವಾಷಿಂಗ್ಟನ್:ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಸಾಮಾಜಿಕ ಅಂತರದ ಮಾರ್ಗಸೂಚಿಯನ್ನು ಏಪ್ರಿಲ್ 30ರ ವರೆಗೂ ವಿಸ್ತರಿಸಲಾಗಿದೆ.
ನೀವು ಎಷ್ಟು ಪರಿಣಾಮಕಾರಿಯಾಗಿ ಈ ಸಾಮಾಜಿಕ ಅಂತರವನ್ನು ಅನುಸರಿಸುತ್ತೀರೋ ಈ ಮಹಾಮಾರಿಯನ್ನು ಅಷ್ಟೇ ವೇಗವಾಗಿ ಅಂತ್ಯಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಬಗ್ಗೆ ಶ್ವೇತಭವನದಲ್ಲಿ ಮಾತನಾಡಿದ ಅವರು, ಕೊರೊನಾ ಹರಡುವಿಕೆಯನ್ನು ಕಡಿಮೆ ಮಾಡುವ ಸಲುವಾಗಿ ಸಾಮಾಜಿಕ ಅಂತರದ ಮಾರ್ಗಸೂಚಿಯನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗುತ್ತದೆ ಎಂದಿದ್ದಾರೆ.