ಕರ್ನಾಟಕ

karnataka

ETV Bharat / international

ಭಾರಿ ಕಾಳ್ಗಿಚ್ಚು.. ವಿಮಾನದ ಮೂಲಕ ಬೆಂಕಿ ನಂದಿಸುವ ಕಾರ್ಯ ಚುರುಕು

ಕ್ಯಾಲಿಫೋರ್ನಿಯಾ ಬಳಿ ಸುಮಾರು 150 ಎಕರೆಯಷ್ಟು ಪ್ರದೆಶದಲ್ಲಿ ಕಾಳ್ಗಿಚ್ಚು ಆವರಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯ ಚುರುಕಿನಿಂದ ಸಾಗಿದೆ.

Crews battle brush fire north of Los Angeles
ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು

By

Published : Aug 7, 2020, 9:13 AM IST

ಕ್ಯಾಲಿಫೋರ್ನಿಯಾ: ಲಾಸ್ ಏಂಜಲೀಸ್‌ನ ಉತ್ತರಕ್ಕೆ 30 ಮೈಲಿ ದೂರದಲ್ಲಿರುವ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಿಟಾದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ.

ಸುಮಾರು 150 ಎಕರೆಯಷ್ಟು ಪ್ರದೇಶಕ್ಕೆ ಬೆಂಕಿ ಆವರಿಸಿಕೊಂಡಿದೆ. ಆದರೆ, ಅಗ್ನಿಶಾಮಕ ದಳದವರು ಜ್ವಾಲೆ ಹಬ್ಬದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ವಿಮಾನದ ಮೂಲಕ ಬೆಂಕಿ ನಂದಿಸುವ ಕಾರ್ಯ ಚುರುಕು

ವಿಮಾನವು ಬೆಂಕಿ ಹೊತ್ತಿರುವ ಪ್ರದೇಶಗಳಲ್ಲಿ ಅಗ್ನಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ. ಅಮೆರಿಕದ ವಿಮಾನದಲ್ಲಿ ಬೆಂಕಿ ನಂದಿಸುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆದಿದೆ. ಐದು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ ಎಂದು ಲಾಸ್ ಏಂಜಲೀಸ್ ರಾಷ್ಟ್ರೀಯ ಅರಣ್ಯ ಇಲಾಖೆ ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದ್ದು, ಸುತ್ತಮುತ್ತಲ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ABOUT THE AUTHOR

...view details