ವಾಷಿಂಗ್ಟನ್, ಅಮೆರಿಕ: ಮೊದಲ ಕ್ವಾಡ್ ಒಕ್ಕೂಟದ ನಾಯಕರ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಅವರೊಂದಿಗೆ ನಡೆಸಿದ ಚರ್ಚೆ ಅತ್ಯಂತ ಫಲಪ್ರದವಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರು ಪ್ರಧಾನಿ ಮೋದಿ ಕ್ವಾಡ್ ಮೀಟಿಂಗ್ನಲ್ಲಿ ಭಾಗವಹಿಸಿರುವ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಮೆರಿಕ ಶ್ವೇತ ಭವನದಲ್ಲಿ ಈ ಸಭೆ ನಡೆಸಿದ್ದು, ಸಭೆಯ ನಂತರ ಟ್ವೀಟ್ ಮಾಡಿದ್ದು, ಟ್ವೀಟ್ನಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ.
ಕ್ವಾಡ್ ನಾಯಕರ ಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ ಮಾತನಾಡಿದ್ದ ಅವರು ಇಂಡೋ-ಪೆಸಿಫಿಕ್ನಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬೇಕೆಂದು, ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ರಾಷ್ಟ್ರಗಳು ಪರಸ್ಪರ ಸಹಕಾರ ನೀಡಬೇಕೆಂದು ಪ್ರತಿಪಾದಿಸಿದರು.