ರಿಯೊ ಡಿ ಜನೈರೊ:ಬ್ರೆಜಿಲ್ನ ನಟಾಲ್ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ತಾಯಿ-ಮಗಳು ಹಾಗೂ ಮತ್ತಿಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.