ಸ್ಯಾನ್ ಫ್ರಾನ್ಸಿಸ್ಕೋ: ಕಪ್ಪು ವರ್ಣೀಯರ ಹತ್ಯೆಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಲು ಪ್ರಚೋದನೆ ನೀಡುತ್ತಿದ್ದ ಸುಮಾರು 200 ಸೋಷಿಯಲ್ ಮೀಡಿಯಾ ಖಾತೆಗಳನ್ನು ಫೇಸ್‌ಬುಕ್ ತೆಗೆದುಹಾಕಿದೆ.
ಮಿನ್ನಿಯಾಪೊಲೀಸ್ನ ಅಧಿಕಾರಿ ನೀಡಿದ ಹಿಂಸೆಯಿಂದಾಗಿ ಕಪ್ಪುವರ್ಣಿಯ ಜಾರ್ಜ್ ಫ್ಲಾಯ್ಡ್ ಮೃತಪಟ್ಟ ಬಳಿಕ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕೊರೊನಾ ಭೀತಿಯ ನಡುವೆಯೂ ಅಮೆರಿಕದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕೆಲವು ಸೋಷಿಯಲ್ ಮೀಡಿಯಾ ಖಾತೆಗಳ ಅಡ್ಮಿನ್ಗಳು ತಮ್ಮ ಗುಂಪಿನ ಸದಸ್ಯರಿಗೆ, ಇತರರಿಗೆ ಪ್ರತಿಭಟನೆ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ.