ಸ್ಯಾನ್ ಫ್ರಾನ್ಸಿಸ್ಕೋ : ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಹೆದ್ದಾರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
106 ಅವೆನ್ಯೂ ಪ್ರದೇಶದ ಇ / ಬಿ 580 ಫ್ರೀವೇನಲ್ಲಿ ಈ ಘಟನೆ ನಡೆದಿದ್ದು, ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ ಎಂದು ಓಕ್ಲ್ಯಾಂಡ್ ಪೊಲೀಸ್ ಇಲಾಖೆಯ ಕ್ಯಾಲಿಫೋರ್ನಿಯಾ ಹೈವೇ ಪೆಟ್ರೋಲ್(ಗಸ್ತು) (ಸಿಹೆಚ್ಪಿ) ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಡಚಣೆ ಉಂಟಾಗಿತ್ತು. ಹೀಗಾಗಿ ವಾಹನ ಸವಾರರಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಯಿತು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಓಕ್ಲ್ಯಾಂಡ್ ಪೊಲೀಸ್ ಟ್ವೀಟ್ ಮಾಡಿದೆ.
ಅಮೆರಿಕದಲ್ಲಿ ಗುಂಡಿನ ದಾಳಿಗಳು ನಡೆಯುವುದು ಕಾಮನ್ ಎನ್ನುವಂತಾಗಿದೆ. ವರ್ಷದಲ್ಲಿ ವಿವಿಧ ನಗರಗಳಲ್ಲಿ ಇಂತಹ ಸುದ್ದಿಗಳು ವರದಿಯಾಗುತ್ತಲೇ ಇರುತ್ತವೆ.