ನ್ಯೂಯಾರ್ಕ್:ಇಂಡಿಯಾನಾಪೊಲಿಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಫೆಡ್ಎಕ್ಸ್ ಕಂಪನಿಯಲ್ಲಿ 19 ವರ್ಷದ ಮಾಜಿ ಉದ್ಯೋಗಿ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ನಾಲ್ವರು ಸಿಖ್ಖರು ಸಾವನ್ನಪ್ಪಿದ್ದಾರೆ ಎಂದು ಸಿಖ್ ಒಕ್ಕೂಟ ತಿಳಿಸಿದೆ.
ಗುರುವಾರ ರಾತ್ರಿ ಅಮೆರಿಕದ ಇಂಡಿಯಾನಾಪೊಲಿಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 8 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಭಾರತೀಯ ಮೂಲದ ನಾಲ್ವರು ಸಿಖ್ ಸಮುದಾಯದವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ಬಳಿಕ ಬಂದೂಕುಧಾರಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.