ಮೆಕ್ಸಿಕೋ ಸಿಟಿ, ಮೆಕ್ಸಿಕೋ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 22 ಮಂದಿ ಗಾಯಗೊಂಡಿರುವ ಘಟನೆ ಮೆಕ್ಸಿಕೋ ನಗರದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ ಎಂದು ಮೇಯರ್ ಕ್ಲೌಡಿಯಾ ಶೈನ್‌ಬೌಮ್ ತಿಳಿಸಿದ್ದಾರೆ.
ಕೊಯೊಕನ್ ಅವೆನ್ಯೂ ಎಂಬಲ್ಲಿ ಘಟನೆ ನಡೆದಿದ್ದು, ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಸುಟ್ಟ ಗಾಯಗಳಾಗಿದ್ದು, ಇನ್ನೂ ಕೆಲವರಿಗೆ ಮೂಳೆ ಮುರಿತ ಮುಂತಾದ ಮಾದರಿಗೆ ಗಾಯಗಳಿಗೆ ತುತ್ತಾಗಿದ್ದಾರೆ.
ಗಾಯಾಳುಗಳಲ್ಲಿ ಇಬ್ಬರು ಕೋವಿಡ್-19 ರೋಗಿಗಳೂ ಕೂಡಾ ಇದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಿವಾಸದಲ್ಲಿ ಇಟ್ಟಿದ್ದ ಎಲ್ಪಿಜಿ ಸಿಲಿಂಡರ್ಗಳು ಲೀಕಾಗಿ ಸ್ಪೋಟಗೊಂಡಿವೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗೆ ದೌಡಾಯಿಸಿದ್ದು ಗಾಯಗೊಂಡವರಿಗೆ ನೆರವಾಗಿದೆ. ಇದರ ಜೊತೆಗೆ ಅವಶೇಷಗಳಡಿಯಲ್ಲಿ ಸಿಲುಕಿರಬಹುದಾದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:ಆಫ್ಘನ್ನಲ್ಲಿ ಜಾಗತಿಕ ಭಯೋತ್ಪಾದನೆ ನಿಗ್ರಹಕ್ಕೆ ಎಲ್ಲ ದೇಶಗಳು ಒಂದಾಗಬೇಕಿದೆ: ವಿಶ್ವಸಂಸ್ಥೆ ಕರೆ