ಸ್ಯಾನ್ ಫ್ರಾನ್ಸಿಸ್ಕೊ:ಈಗಾಗಲೇಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದುಪಡಿಸಲಾಗಿದ್ದರೆ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಇದರ ಮುಂದುವರಿದ ಕ್ರಮವಾಗಿ ಗೂಗಲ್ ಇದೀಗ ತನ್ನ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ 2020 ಚುನಾವಣೆಯ ಪ್ರಚಾರದ ಆ್ಯಪ್ ಅನ್ನು ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿದೆ.
ಆ್ಯಪ್ನಲ್ಲಿ ಯಾವುದೇ ವಿಷಯವನ್ನು ಅಪ್ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಅದನ್ನು ತೆಗೆದುಹಾಕಲಾಗಿದೆ ಎಂದು ಆಂಡ್ರಾಯ್ಡ್ ಪೊಲೀಸ್ ವೆಬ್ಸೈಟ್ ಹೇಳಿದೆ.
ನವೆಂಬರ್ 2020 ರ ಚುನಾವಣೆಯ ನಂತರ ಆ್ಯಪ್ ಅನ್ನು ಆಂಡ್ರಾಯ್ಡ್ ಆವೃತ್ತಿ ಮತ್ತು ಐಒಎಸ್ ಆವೃತ್ತಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ, ಅಕ್ಟೋಬರ್ 30 ರಿಂದ ಪ್ಲೇ ಸ್ಟೋರ್ ಆವೃತ್ತಿಯನ್ನು ನವೀಕರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.