ವಾಷಿಂಗ್ಟನ್ :ಎರಡು ಶತಮಾನಗಳಿಂದ ಪುರುಷರೇ ಆಳುತ್ತಿದ್ದ ಅಮೆರಿಕ ರಾಜಕಾರಣದಲ್ಲಿ ಭಾರತೀಯ ಮೂಲದ ಕಪ್ಪು ಮಹಿಳೆ ಕಮಲಾ ಹ್ಯಾರಿಸ್ ವಿಜಯದ ಪತಾಕೆ ಹಾರಿಸಿದ್ದಾರೆ. ಅಮೆರಿಕ ಸಂಯುಕ್ತ ಸಂಸ್ಥಾನಕ್ಕೆ 49ನೇ ಉಪಾಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿ ಹೊಸ ಭಾಷ್ಯ ಬರೆಯಲು ಸಜ್ಜಾಗಿದ್ದಾರೆ. ಕಮಲಾ ಹ್ಯಾರಿಸ್ ಶ್ವೇತಭವನ ಪ್ರವೇಶ ಭಾರತೀಯರಲ್ಲಿಯೂ ಸಂತಸ ತಂದಿದೆ. ಉಪಾಧ್ಯಕ್ಷೆಯಾಗಿ ಆಯ್ಕೆಯಾಗುತ್ತಿರುವ ಮೊದಲ ಏಷ್ಯಾ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
56 ವರ್ಷದ ಕಮಲಾ ಹ್ಯಾರಿಸ್ ಅವರು ಕ್ಯಾಲಿಫೋರ್ನಿಯಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಅಮೆರಿಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಉಪಾಧ್ಯಕ್ಷ ಸ್ಥಾನ ಪಟ್ಟ ಅಲಂಕರಿಸುತ್ತಿದ್ದಾರೆ. ಹ್ಯಾರಿಸ್ ತಾಯಿ ಭಾರತೀಯರಾದ್ರೆ, ತಂದೆ ಜಮೈಕಾದವರು. ಇವರಿಬ್ಬರು ಹಲವು ವರ್ಷಗಳ ಹಿಂದೆ ಅಮೆರಿಕದಲ್ಲಿ ವಾಸ್ತವ್ಯ ಆರಂಭಿಸಿದ್ದರು. ಕಮಲಾ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ವಕೀಲರಾಗಿದ್ದರು. ಅಲ್ಲದೇ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿ ಕೂಡ ಸೇವೆ ಸಲ್ಲಿಸಿದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.