ಕರ್ನಾಟಕ

karnataka

ETV Bharat / international

ಎರಡೂ ದೇಶ ಒಪ್ಪಿದ್ರೆ ಮಾತ್ರ ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆಗೆ ಸಿದ್ಧ: ಟ್ರಂಪ್​ - Kashmir issue

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕಾಶ್ಮೀರ ವಿಚಾರ

By

Published : Sep 23, 2019, 11:42 PM IST

ನ್ಯೂಯಾರ್ಕ್​:ಭಾರತ ಹಾಗೂ ಪಾಕಿಸ್ತಾನ ಎರಡೂ ಒಪ್ಪಿದರೆ ಮಾತ್ರ ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ತಾವು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದಾರೆ.

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರನ್ನು ಅಮೆರಿಕದ ನ್ಯೂಯಾರ್ಕ್​ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕಾಶ್ಮೀರ ಸಮಸ್ಯೆಯ ಬಗ್ಗೆಯೂ ಚರ್ಚೆ ನಡೆದಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ಸಮಸ್ಯೆಯು ಬಹಳ ಹಿಂದಿನದ್ದು ಹಾಗೂ ಸಂಕೀರ್ಣವಾದುದಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಲು ನಾನು ಸಿದ್ಧ ಆದರೆ ಎರಡೂ ದೇಶಗಳು ಒಪ್ಪಿದರೆ ಮಾತ್ರ ಎಂದು ಟ್ರಂಪ್​, ಇಮ್ರಾನ್​ ಖಾನ್​ಗೆ ಸ್ಪಷ್ಟಪಡಿಸಿದ್ದಾರೆ.

ನಾನು ಭಾರತದ ಪ್ರಧಾನಿ ಮೋದಿ, ಹಾಗೆಯೇ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಜೊತೆಗೂ ಉತ್ತಮ ಸ್ನೇಹ ಹೊಂದಿದ್ದೇನೆ. ಇಬ್ಬರೂ ಯಾವುದೇ ಸಂದರ್ಭದಲ್ಲಿ ಒಪ್ಪಿಗೆ ಸೂಚಿಸಿದರೂ ನಾನು ಮಧ್ಯಸ್ಥಿಕೆಗಾರನಾಗಲು ರೆಡಿಯಾಗಿದ್ದೇನೆ. ಮಧ್ಯಸ್ಥಿಕೆಯನ್ನು ಊಈ ಹಿಂದೆಯೂ ಮಾಡಿದ್ದು, ಅದರಲ್ಲಿ ಯಶಸ್ಸನ್ನೂ ಕಂಡಿದ್ದೇನೆ ಎಂದು ಟ್ರಂಪ್​ ಹೇಳಿದ್ದಾರೆ.

ABOUT THE AUTHOR

...view details