ಕರ್ನಾಟಕ

karnataka

ETV Bharat / international

ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮಂಡಳಿಗೆ ಭಾರತ ಆಯ್ಕೆ - ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ

2022-24ರ ಅವಧಿಗೆ ಯುನ್​​ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ ಭಾರತ ಆಯ್ಕೆಯಾಗಿದ್ದು, ಭಾರತದ ಪರ ವಿಶ್ವಾಸ ಮತ ಚಲಾಯಿಸಿದ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಟಿ.ಎಸ್. ತಿರುಮೂರ್ತಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

By

Published : Jun 8, 2021, 9:29 AM IST

ನ್ಯೂಯಾರ್ಕ್​: ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ (ECOSOC)ಗೆ 2022-24ರ ಅವಧಿಗೆ ಭಾರತ ಆಯ್ಕೆಯಾಗಿದೆ.

ವಿಶ್ವಸಂಸ್ಥೆಯ ಆರು ಪ್ರಮುಖ ಅಂಗಸಂಸ್ಥೆಗಳಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಕೂಡ ಒಂದಾಗಿದ್ದು, ಅಂತಾರಾಷ್ಟ್ರೀಯ ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚರ್ಚಿಸಿ, ಸದಸ್ಯ ರಾಷ್ಟ್ರಗಳಿಗೆ ನೀತಿ ಶಿಫಾರಸುಗಳನ್ನು ರೂಪಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ಒಟ್ಟು 54 ದೇಶಗಳನ್ನು ಮೂರು ವರ್ಷಗಳ ಅವಧಿಗೆ ECOSOC ಸದಸ್ಯ ರಾಷ್ಟ್ರಗಳನ್ನಾಗಿ ಆಯ್ಕೆಮಾಡಲಾಗುತ್ತದೆ. ಪ್ರಸ್ತುತ 2019 ರಿಂದ 2021ರ ವರೆಗಿನ ಅವಧಿ ಡಿಸೆಂಬರ್​ಗೆ ಮುಕ್ತಾಯಗೊಳ್ಳಲಿದ್ದು, 2022-24ರ ಅವಧಿಗೆ ಯುನ್​​ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ ಭಾರತ ಆಯ್ಕೆಯಾಗಿದೆ.

ಈ ವಿಚಾರವನ್ನು ಟ್ವೀಟ್​ ಮಾಡಿ ಖಚಿತಪಡಿಸಿರುವ ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಅವರು, ಭಾರತದ ಪರ ವಿಶ್ವಾಸ ಮತ ಚಲಾಯಿಸಿದ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಧನ್ಯವಾದಗಳನ್ನ ಅರ್ಪಿಸಿದ್ದಾರೆ.

For All Latest Updates

ABOUT THE AUTHOR

...view details