ವಾಷಿಂಗ್ಟನ್:ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಪರ್ಸೀವರೆನ್ಸ್ ರೋವರ್ ನೌಕೆ ಮಂಗಳನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು, ಇದರ ನೇತೃತ್ವ ವಹಿಸಿದ್ದು ಭಾರತೀಯ ಮೂಲದ ಅಮೆರಿಕನ್ ವಿಜ್ಞಾನಿ ಆಗಿರುವ ಸ್ವಾತಿ ಮೋಹನ್.
ರೋವರ್ ಯಶಸ್ವಿಯಾಗಿ ಲ್ಯಾಂಡ್ ಆಗಿರುವುದನ್ನು ಖಚಿತಪಡಿಸಿದ ಸ್ವಾತಿ ಮೋಹನ್, ಪರ್ಸೀವರೆನ್ಸ್ ಮಂಗಳ ಗ್ರಹದ ಮೇಲ್ಮೈಯಲ್ಲಿ ಸುರಕ್ಷಿತವಾಗಿರುತ್ತದೆ ಮತ್ತು ಕೆಲ ಕುರುಹುಗಳನ್ನು ಹುಡುಕಲು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.