ಕರ್ನಾಟಕ

karnataka

ETV Bharat / international

ನ್ಯೂಯಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ : ಭಾರತೀಯ ಅಮೆರಿಕನ್ನರಿಂದ ಖಂಡನೆ

ನ್ಯೂಯಾರ್ಕ್​ನಲ್ಲಿ 8 ಅಡಿ ಎತ್ತರದ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಇದನ್ನು ಭಾರತೀಯ ಅಮೆರಿಕನ್ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

Gandhi statue vandalism in New York
ನ್ಯೂಯಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

By

Published : Feb 8, 2022, 9:40 AM IST

ವಾಷಿಂಗ್ಟನ್: ನ್ಯೂಯಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವುದನ್ನು ಸೋಮವಾರದಂದು ಇಂಡೋ-ಅಮೆರಿಕನ್ ಸಮುದಾಯದ ಮುಖಂಡರು ಖಂಡಿಸಿದ್ದಾರೆ.

ನ್ಯೂಯಾರ್ಕ್ ಮ್ಯಾನ್‌ಹಟನ್​ ಯೂನಿಯನ್ ಸ್ಕ್ವೇರ್‌ನಲ್ಲಿರುವ 8 ಅಡಿ ಎತ್ತರದ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಇದನ್ನು ಯುಎಸ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತೀವ್ರವಾಗಿ ಖಂಡಿಸಿದ್ದು, ಇಂದೊಂದು ತುಚ್ಛ ಕಾರ್ಯ ಎಂದು ಹೇಳಿದೆ.

ಈ ಹೇಯ ಕೃತ್ಯ ಮಾಡಿದ್ದು ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ನ್ಯೂಯಾರ್ಕ್​​ನಲ್ಲಿರುವ ಭಾರತೀಯ​ ಕಚೇರಿ ತಿಳಿಸಿದೆ. ಈ ಕೃತ್ಯದ ಬಗ್ಗೆ ಸ್ಥಳೀಯ ಆಡಳಿತದೊಂದಿಗೆ ಚರ್ಚಿಸಲಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:ಫೆಬ್ರವರಿಯಲ್ಲಿ ಇಮ್ರಾನ್ ಖಾನ್ ರಷ್ಯಾಕ್ಕೆ ಭೇಟಿ ನೀಡುವ ಸಾಧ್ಯತೆ!

ಈ ದುಷ್ಕೃತ್ಯದ ವಿರುದ್ಧ ಭಾರತೀಯ ಅಮೆರಿಕನ್ನರು ತೀವ್ರವಾಗಿ ಖಂಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2020ರ ಡಿಸೆಂಬರ್​ನಲ್ಲಿ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಲಾಗಿತ್ತು. ಇದೀಗ ಮತ್ತೊಂದು ಇಂತಹದ್ದೇ ಘಟನೆ ಅಮೆರಿಕದಲ್ಲಿರುವ ಭಾರತೀಯರನ್ನು ಕೆರಳುವಂತೆ ಮಾಡಿದೆ.

ABOUT THE AUTHOR

...view details