ವಾಷಿಂಗ್ಟನ್: ಉಕ್ರೇನ್ ಮತ್ತು ರಷ್ಯಾ ನಡುವಿನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರಾದ ದಲ್ವೀರ್ ಭಂಡಾರಿ ಅವರು ರಷ್ಯಾದ ವಿರುದ್ಧ ಮತ ಚಲಾಯಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು 13 ನ್ಯಾಯಾಧೀಶರು ಬೆಂಬಲಿಸಿದ್ದಾರೆ.
ಕಳೆದ ಫೆಬ್ರವರಿ 24 ರಂದು ಉಕ್ರೇನ್ ಭೂಪ್ರದೇಶದಲ್ಲಿ ರಷ್ಯಾ ಸೇನೆ ಪ್ರಾರಂಭಿಸಿರುವ ಕಾರ್ಯಾಚರಣೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಐಸಿಜೆ ಅಧ್ಯಕ್ಷರಾದ ನ್ಯಾಯಾಧೀಶ ಜೋನ್ ಡೊನೊಗ್ಯು ತಿಳಿಸಿದ್ದಾರೆ. ಪ್ರಕರಣದ ಅಂತಿಮ ತೀರ್ಮಾನ ಇನ್ನೂ ಬಾಕಿ ಇದೆ. ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಅಮೆರಿಕ ಸ್ವಾಗತಿಸಿದ್ದು, ಉಕ್ರೇನ್‌ನಲ್ಲಿ ರಷ್ಯಾ ತನ್ನ ಸೇನಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಒತ್ತಾಯಿಸಿದೆ.