ವಾಷಿಂಗ್ಟನ್: ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಅಮೆರಿಕದ ಉಪಾಧ್ಯಕ್ಷ ಅಭ್ಯರ್ಥಿ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿದ್ದು, ಪ್ರಮುಖ ಹುದ್ದೆಗೆ ಪ್ರಮುಖ ಪಕ್ಷವೊಂದರಿಂದ ಆಯ್ಕೆಯಾದ ಭಾರತೀಯ ಮತ್ತು ಆಫ್ರಿಕನ್ ಮೂಲದ ಮೊದಲ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಮುಖ ರಾಜಕೀಯ ಪಕ್ಷದಿಂದ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನಾಮ ನಿರ್ದೇಶನಗೊಂಡ ಮೊದಲ ಆಫ್ರಿಕನ್ ಅಮೆರಿಕನ್ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಕಮಲಾ ಹ್ಯಾರಿಸ್ ಅವರ ತಾಯಿ ಭಾರತ ಮೂಲದವರು ಮತ್ತು ತಂದೆ ಜಮೈಕಾ ಮೂಲದವರಾಗಿದ್ದಾರೆ. ಒಂದೊಮ್ಮೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆಯಲ್ಲಿ ಆಯ್ಕೆ ಆದರೆ, ಹ್ಯಾರಿಸ್ ಉಪಾಧ್ಯಕ್ಷರಾಗಲಿದ್ದಾರೆ.