ವಾಷಿಂಗ್ಟನ್ (ಅಮೆರಿಕ): ಅಮೆರಿಕದಲ್ಲಿ ಜೋ ಬೈಡನ್ ನೇತೃತ್ವದ ಡೆಮಾಕ್ರಟಿಕ್ ಪಕ್ಷದ ರಿಪಬ್ಲಿಕನ್ ಪಕ್ಷ ಸೋತಿರುವುದನ್ನು ಒಪ್ಪಿಕೊಳ್ಳುವಂತೆ ಡೊನಾಲ್ಡ್ ಟ್ರಂಪ್ ಅಳಿಯ ಜೇರೆಡ್ ಕುಶ್ನರ್ ಟ್ರಂಪ್ಗೆ ಮನವಿ ಮಾಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಡೊನಾಲ್ಡ್ ಟ್ರಂಪ್ ಹಿರಿಯ ಸಲಹೆಗಾರರೂ ಆಗಿರುವ ಜೇರೆಡ್ ಕುಶ್ನರ್, ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳುವ ಬಗ್ಗೆ ಟ್ರಂಪ್ ಅವರನ್ನು ಮನವೊಲಿಸಲು ಮುಂದಾಗಿದ್ದು, ಭಾನುವಾರ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಜೋ ಬೈಡನ್ ಅಮೆರಿಕದ 46ನೇ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಡೊನಾಲ್ಡ್ ಟ್ರಂಪ್ ಬೈಡನ್ ಅವರನ್ನು ತಪ್ಪಾಗಿ ಬಿಂಬಿಸಲು ಮುಂದಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ಈ ಕುರಿತು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಈ ಕುರಿತು ಅಸೋಸಿಯೇಟೆಡ್ ಪ್ರೆಸ್ ಕೂಡ ವರದಿ ಮಾಡಿದ್ದು, ಕುಶ್ನರ್ ಕೆಲವರಿಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ವರದಿಯೊಂದರಲ್ಲಿ ಬಹಿರಂಗಪಡಿಸಲಾಗಿದೆ. ಈ ಹಿಂದೆ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗ ಪ್ರಾಮಾಣಿಕ ಮತ ಎಣಿಕೆ ಆಗುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಟ್ರಂಪ್ ಹೇಳಿಕೆ ನೀಡಿದ್ದರು.
ಸೋಮವಾರದಿಂದ ಕಾನೂನ ಹೋರಾಟ ಆರಂಭವಾಗಲಿದೆ ಎಂದು ಹೇಳಿದ್ದರು ಟ್ರಂಪ್. ಈ ಹಿನ್ನೆಲೆಯಲ್ಲಿ ಅವರ ಅಳಿಯ ಜೇರೆಡ್ ಕುಶ್ನರ್, ಟ್ರಂಪ್ ಅವರನ್ನು ಮನವೊಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.