ವಾಷಿಂಗ್ಟನ್(ಅಮೆರಿಕ) : ಅಫ್ಘಾನಿಸ್ತಾನದ ಬಿಕ್ಕಟ್ಟಿನ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮೊದಲ ಬಾರಿಗೆ ಮೌನ ಮುರಿಯಲಿದ್ದಾರೆ. ಕಾಬೂಲ್ನ ಪ್ರಸ್ತುತ ಸ್ಥಿತಿಯ ಬಗ್ಗೆ ಅವರು ಕೆಲವೇ ಕ್ಷಣಗಳಲ್ಲಿ ಮಾತನಾಡಲಿದ್ದಾರೆ ಎಂದು ಶ್ವೇತಭವನ ಹೇಳಿಕೆ ಬಿಡುಗಡೆ ಮಾಡಿದೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೈಡನ್ ಶ್ವೇತಭವನಕ್ಕೆ ಹಿಂದಿರುಗಲಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಕಾಬೂಲ್ನಿಂದ ನವದೆಹಲಿಗೆ ಬಂದಿಳಿದ C-17 ವಿಮಾನ!
ಸದ್ಯ ಆಫ್ಘನ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ವಿಶ್ವಸಂಸ್ಥೆಯೂ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ, ಅಫ್ಘಾನಿಸ್ತಾನದಲ್ಲಿ ಜಾಗತಿಕ ಭಯೋತ್ಪಾದನೆ ಬೆದರಿಕೆ ನಿಗ್ರಹಿಸಲು ವಿಶ್ವದ ಎಲ್ಲ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದೆ. ಈ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾಷಣ ಮಾಡಲಿದ್ದಾರೆ.