ವಾಷಿಂಗ್ಟನ್: ಅಮೆರಿಕದ 46ನೇ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಇಂದು ಪದಗ್ರಹಣ ಮಾಡಲಿದ್ದು, ಉಪಾಧ್ಯಕ್ಷೆಯಾಗಿ ಭಾರತದ ಮೂಲಕದ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಭಾರಿ ಭದ್ರತೆ ನಡುವೆ ಈ ಕಾರ್ಯಕ್ರಮ ನಡೆಯಲಿದ್ದು, ಕ್ಯಾಪಿಟಲ್ ಹಿಲ್ನ ಬಳಿ ನಡೆಯುವ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಬೈಡನ್ ಅವರಿಗೆ ಪ್ರತಿಜ್ಞಾವಿಧಿ ಬೋಧನೆ ಮಾಡಲಿದ್ದಾರೆ. ವಿಶೇಷವೆಂದರೆ ಅಮೆರಿಕದ ಮೊಟ್ಟ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಕೊರೊನಾ ಹಾವಳಿಯಿಂದ ಸಾವನ್ನಪ್ಪಿರುವ ಜನರಿಗೆ ಬೈಡನ್ ಸಂತಾಪ ಸೂಚಿಸಲಿದ್ದಾರೆ ಎಂದು ತಿಳಿದು ಬಂದಿದೆ.