ನ್ಯೂಯಾರ್ಕ್ (ಅಮೆರಿಕ) :ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸುವಿಕೆ ನಿಷೇಧ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಬಗ್ಗೆ ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (ಯುಎಸ್ಸಿಐಆರ್ಎಫ್) ಆಕ್ಷೇಪ ವ್ಯಕ್ತಪಡಿಸಿದೆ. ಉಚ್ಛ ನ್ಯಾಯಾಲಯದ ಆದೇಶವನ್ನು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಕರೆದಿದೆ.
ತರಗತಿಯಲ್ಲಿ ಹಿಜಾಬ್ ಧರಿಸುವಿಕೆಗೆ ನಿಷೇಧಿಸಿದ ಹೈಕೋರ್ಟ್ ಆದೇಶವು, 'ತಮ್ಮ ನಂಬಿಕೆಗೆ ಅನುಗುಣವಾಗಿ ಶಿಕ್ಷಣ ಪಡೆಯಬೇಕೆಂಬ ಮಹಿಳೆಯರು ಮತ್ತು ಬಾಲಕಿಯರಿಗೆ ಮಾಡಿರುವ ಗಂಭೀರ ಅನ್ಯಾಯ ಮತ್ತು ಅವಮಾನ' ಎಂದು ಆಯೋಗದ ಆಯುಕ್ತರಲ್ಲಿ ಒಬ್ಬರಾದ ಅನುರಿಮಾ ಭಾರ್ಗವ್ ಹೇಳಿದ್ದಾರೆ.